ಗ್ರಾಮೀಣ ಸೊಗಡಿನ ಕಥಾಹಂದರ ಹೊಂದಿರುವ “ದೊಡ್ಡಹಟ್ಟಿ ಬೋರೇಗೌಡ” ಚಿತ್ರ ಟ್ರೇಲರ್ ಮೂಲಕ ಜನಮನ ಗೆದ್ದಿದೆ. 2021 ರ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಅತ್ತ್ಯುತ್ತಮ ಚಿತ್ರ ಎಂಬ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಬಿಡುಗಡೆಗೂ ಪೂರ್ವದಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಹಾಡೊಂದು ಜನವರಿ 30 ರ ಸೋಮವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಹರ್ಷವರ್ಧನ್ ರಾಜ್ ಸಂಗೀತ ನೀಡಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ಮೆಹಬೂಬ್ ಸಾಬ್ ಹಾಡಿದ್ದಾರೆ.
ರಾಜರಾಜೇಶ್ವರಿ ಕಂಬೈನ್ಸ್ ಲಾಂಛನದಲ್ಲಿ ಬಿ.ಸಿ.ಶಶಿಕುಮಾರ್ ಹಾಗೂ ಕೆ.ಎಂ.ಲೋಕೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. “ತರ್ಲೆ ವಿಲೇಜ್”, “ಪರಸಂಗ” ಚಿತ್ರಗಳನ್ನು ನಿರ್ದೇಶಿಸಿದ್ದ ಕೆ.ಎಂ.ರಘು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
Also Read : Doddhatti Boregowda song to released soon
ಹಳ್ಳಿಯ ಪ್ರತಿಭೆಗಳು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕಲಾವಿದರಿಗೆ ಮೂರು ತಿಂಗಳು ವಿಶೇಷ ತರಬೇತಿ ನೀಡಲಾಗಿದೆ. ಶಿವಣ್ಣ ಬೀರಹುಂಡಿ, ಗೀತಾ, ಲಾವಣ್ಯ, ಕಲಾರತಿ ಮಹದೇವ್, ಕಾತ್ಯಾಯಿನಿ, ಯೋಗೇಶ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ವೀನಸ್ ನಾಗರಾಜ್ ಅವರ ಛಾಯಾಗ್ರಹಣವಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಸುಖಾಂತ್ಯ ಚಿತ್ರ...
ಆಸ್ಕರ್ ಗೆ ಕಾಲಿ...
'Combat warriors' ರಿಂದ ಕಲಾ...
ಆಸ್ಕರ್ 2023 ಪಟ್ಟಿ...
'ದಸರಾ' ಟೀಸರ್ ಬಿಡ...
ಮದುವೆಗೆ ಆಮಂತ್ರ...
ಗಾಯಕಿ ವಾಣಿ ಜಯರ...
ಸ್ವಾಮಿ ಸನ್ನಿಧಿ...
ಇಂದಿನಿಂದ ಸುವರ್...
Veda Krishnamurthy visits Hoysala film s...