ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿರುವುದು ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಪ್ರಧಾನ ಕಾರ್ಯಕ್ರಮ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಘವೇಂದ್ರ ಚಿತ್ರವಾಣಿಯ ವಿಶೇಷ ಪ್ರಶಸ್ತಿಯನ್ನು ನಟಿ ತಾರಾ ಅನುರಾಧ, ‘ಗಂಧದಗುಡಿ’ ಸಿನಿಮಾ ನಿರ್ಮಾಣಕ್ಕೆ ಅಶ್ವಿನಿ ಪುನೀತ್ ರಾಜಕುಮಾರ ಹಾಗೂ ‘ಕಾಂತಾರ’ ಸಿನಿಮಾ ನಿರ್ಮಾಣಕ್ಕೆ ಹೊಂಬಾಳೆ ಫಿಲ್ಮಸ್ ನ ಶೈಲಜಾ ವಿಜಯ್ ಕಿರಗಂದೂರು ಪಡೆದರು. 2021ರ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿಗಳನ್ನು ಹಿರಿಯ ಚಲನಚಿತ್ರ ನಿರ್ಮಾಪಕರಾದ ಶ್ರೀ ಪಿ. ಧನರಾಜ್ ಹಾಗೂ ಹಿರಿಯ ಪತ್ರಕರ್ತ ಈಶ್ಚರ ದೈತೋಟ ಪಡೆದರು. ಹಾಗೆಯೇ 2022ರ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿಗಳನ್ನು ಹಿರಿಯ ನಟ-ನಿರ್ಮಾಪಕರಾದ ಶ್ರೀ ಕುಮಾರ್ ಗೋವಿಂದ್ ಹಾಗೂ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ ಅವರು ಪಡೆದರು.
ಇದೇ ಸಂದರ್ಭದಲ್ಲಿ ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬ ಕೊಡುವ ಡಾಕ್ಟರ್ ರಾಜಕುಮಾರ್ ಪ್ರಶಸ್ತಿಯನ್ನು ಖ್ಯಾತ ಹಿನ್ನಲೆ ಗಾಯಕ ರಾಜೇಶ್ ಕೃಷ್ಣನ್ ಪಡೆದರು. ಈ ಸಂದರ್ಭದಲ್ಲಿ ರಾಜೇಶ್ ಕೃಷ್ಣನ್ ‘ಡಾಕ್ಟರ್ ರಾಜ್ ಕುಮಾರ್ ಹೆಸರೇ ಒಂದು ಅವಾರ್ಡ್ ನಂಗೆ. ರಾಜಣ್ಣ ಸೇರಿ ರಾಘಣ್ಣ ಶಿವಣ್ಣ ಅಪ್ಪು ಅವರ ಸಾಕಷ್ಟು ಚಿತ್ರಗಳಿಗೆ ಹಾಡುದ್ದೇನೆ’ ಎಂದರು. ಇನ್ನು ‘ಯಜಮಾನ’ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿಯನ್ನು ಶ್ರೀಮತಿ ಭಾರತಿ ವಿಷ್ಣುವರ್ಧನ್ ಕೊಡುತ್ತಾ ಬಂದಿದ್ದು ಈ ಪ್ರಶಸ್ತಿಯನ್ನು ಹಿರಿಯ ನಿರ್ದೇಶಕ ನಿರ್ಮಾಪಕ ಸಾಯಿಪ್ರಕಾಶ್ ಪಡೆದರು. ಶ್ರೀಮತಿ ತುಳಸಿ (ಹಿರಿಯ ನಟಿ) ಖ್ಯಾತ ಅಭಿನೇತ್ರಿ ಡಾ. ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ. ಶ್ರೀ ನೋಬಿನ್ ಪಾಲ್ ಅತ್ಯುತ್ತಮ ಸಂಗೀತ ನಿರ್ದೇಶನ, ‘777 ಚಾರ್ಲಿ’ ಚಿತ್ರಕ್ಕಾಗಿ (ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆAಟ್ ಪ್ರೈ ಲಿ) ಪ್ರಶಸ್ತಿ. ಶ್ರೀ ಮಧುಚಂದ್ರ ಅತ್ಯುತ್ತಮ ಕಥಾಲೇಖಕರು, ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರಕ್ಕಾಗಿ (ಖ್ಯಾತ ನಿರ್ದೇಶಕ-ನಿರ್ಮಾಪಕ ಶ್ರೀ ಕೆ.ವಿ. ಜಯರಾಂ ಪ್ರಶಸ್ತಿ, ಶ್ರೀಮತಿ ಮೀನಾಕ್ಷಿ ಜಯರಾಂ) ಅವರಿಂದ. ಶ್ರೀ ಎಂ.ಜಿ. ಶ್ರೀನಿವಾಸ್ (ಶ್ರೀನಿ) ಅತ್ಯುತ್ತಮ ಸಂಭಾಷಣೆ, ‘ಓಲ್ಡ್ ಮಾಂಕ್’ ಚಿತ್ರಕ್ಕಾಗಿ (ಖ್ಯಾತ ಚಿತ್ರಸಾಹಿತಿ ಶ್ರೀ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ, ಡಾ.ಎಚ್.ಕೆ. ನರಹರಿ) ಅವರಿಂದ. ಶ್ರೀ ಕಿರಣ್ ರಾಜ್ (‘777 ಚಾರ್ಲಿ’) ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ (ಹಿರಿತೆರೆ-ಕಿರುತೆರೆ ನಿರ್ದೇಶಕ ಶ್ರೀ ಬಿ. ಸುರೇಶ ಪ್ರಶಸ್ತಿ). ಶ್ರೀ ಪ್ರಮೋದ್ ಮರವಂತೆ ‘ಕಾಂತಾರ’ ಚಿತ್ರದ ‘ಸಿಂಗಾರ ಸಿರಿಯೇ …’ ಗೀತರಚನೆಗಾಗಿ (ಹಿರಿಯ ಪತ್ರಕರ್ತರಾದ ಶ್ರೀ.ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಶ್ರೀ ವಿನಾಯಕರಾಮ್ ಕಲಗಾರು) ಅವರಿಂದ. ಶ್ರೀ ಶ್ರೀನಿವಾಸಮೂರ್ತಿ ಹಿರಿಯ ಪೋಷಕ ಕಲಾವಿದರು (ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ, ಶ್ರೀಮತಿ ನಾಗಮಣಿ ಸೀತಾರಾಮ) ಕುಟುಂಬದವರಿಂದ. ಈ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಹಾಜರಿದ್ದು ಕಾರ್ಯಕ್ರಮ ನಡೆಸಿಕೊಟ್ಟರು.
ಸುಖಾಂತ್ಯ ಚಿತ್ರ...
ಆಸ್ಕರ್ ಗೆ ಕಾಲಿ...
'Combat warriors' ರಿಂದ ಕಲಾ...
ಆಸ್ಕರ್ 2023 ಪಟ್ಟಿ...
'ದಸರಾ' ಟೀಸರ್ ಬಿಡ...
ಮದುವೆಗೆ ಆಮಂತ್ರ...
ಗಾಯಕಿ ವಾಣಿ ಜಯರ...
ಸ್ವಾಮಿ ಸನ್ನಿಧಿ...
ಇಂದಿನಿಂದ ಸುವರ್...
Veda Krishnamurthy visits Hoysala film s...