ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಟೀಸರ್ ಬಿಡುಗಡೆಗೊಂಡು ಅದ್ಭುತ ಸ್ಪಂದನೆ ದೊರಕಿದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಎದುರು ನೋಡುತ್ತಿದ್ದ ಸಿನಿ ಪ್ರೇಮಿಗಳು ಟೀಸರ್ ನೋಡಿ ಪುಳಕಿತರಾಗಿದ್ದಾರೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಸೇರಿ ನಾಲ್ಕು ಭಾಷೆಯಲ್ಲಿ ಈ ಟೀಸರ್ ಅನ್ನು ಸ್ಟಾರ್ ನಟರು ಟೀಸರ್ ಬಿಡುಗಡೆ ಮಾಡಿದರು. ಮಾಸ್ ಆಕ್ಷನ್ ಸಬ್ಜೆಕ್ಟ್ ಒಳಗೊಂಡ ‘ದಸರಾ’ ಈಗಾಗಲೇ ಸಿನಿ ಪ್ರಿಯರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬರುತ್ತಿರುವ ಚಿತ್ರದಲ್ಲಿ ನಾನಿ ಮಾಸ್ ಅವತಾರದಲ್ಲಿ ರಂಜಿಸಲು ಅಣಿಯಾಗಿದ್ದಾರೆ. ಬಾಲಿವುಡ್ ನಟ ಶಾಹಿದ್ ಕಪೂರ್, ಧನುಷ್, ರಕ್ಷಿತ್ ಶೆಟ್ಟಿ, ದುಲ್ಕರ್ ಸಲ್ಮಾನ್ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು.
Also Read : Rakshith Shetty released Naani’s Dasara Film Teaser
ನಾನಿ ಹಾಗೂ ಕೀರ್ತಿ ಸುರೇಶ್ ಜೋಡಿಯಾಗಿರುವ ‘ದಸರಾ’ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ಆಕ್ಷನ್ ಕಟ್ ಹೇಳಿದ್ದಾರೆ. ಮಾರ್ಚ್ 30ರಂದು ಸಿನಿಮಾ ಗ್ರ್ಯಾಂಡ್ ಆಗಿ ತೆರೆ ಕಾಣುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ ಟೀಸರ್ ಝಲಕ್ ಮೂಲಕ ಪ್ರೇಕ್ಷಕರ ಮನ ಸೆಳೆಯಲು ಸಜ್ಜಾಗಿದೆ. ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗವಿದೆ. ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ.
ಅದ್ದೂರಿಯಾಗಿ ರಿ...
'Rakshasaru' hits theaters in August
ಭಾರಿ ಮೊತ್ತಕ್ಕೆ...
Hide and Seek starts shoot
ಸ್ಯಾಂಡಲ್ ವುಡ್ ...
Bomb Threat - Huccha Venkat warns on mis...
ಸುಖಾಂತ್ಯ ಚಿತ್ರ...
ಆಸ್ಕರ್ ಗೆ ಕಾಲಿ...
'Combat warriors' ರಿಂದ ಕಲಾ...
ಆಸ್ಕರ್ 2023 ಪಟ್ಟಿ...