ಹಿಂದು ಮುಸ್ಲಿಂ ಭಾವೈಕ್ಯತೆ ಸಾರುವ ‘ರಂಜಾನ್’ ಸಿನಿಮಾ ಹಿರಿಯ ಲೇಖಕ ಫಕೀರ್ ಮುಹಮ್ಮದ್ ಕಟ್ಪಾಡಿ ಬರೆದಿರುವ ‘ನೊಂಬು’ ಕಥೆಯನ್ನು ಆಧರಿಸಿದೆ. ‘ಸಿಲ್ಲಿ ಲಲ್ಲಿ’ ಹಾಗೂ ಸುಮಾರು 35ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ನಟನಾಗಿ ಗುರುತಿಸಿಕೊಂಡಿರುವ ಸಂಗಮೇಶ ಉಪಾಸೆ ಮೊದಲಬಾರಿ ನಾಯಕನಾಗಿ ಶೀರ್ಷಿಕೆ ಹೆಸರಿನಲ್ಲಿ ಕಾಣಿಸಿಕೊಂಡಿದ್ದು, ಜತೆಗೆ ಚಿತ್ರಕಥೆ-ಸಂಭಾಷಣೆ ಹಾಗೂ ಸಾಹಿತ್ಯ ಬರೆದಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಪಂಚಾಕ್ಷರಿ.ಸಿ. ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಯೂನಿವರ್ಸಲ್ ಸ್ಟುಡಿಯೋ ಮೂಲಕ ಮಡಿವಾಳಪ್ಪ.ಎಂ. ಗೂಗಿ ನಿರ್ಮಾಣ ಮಾಡಿರುವುದು ಹೊಸ ಅನುಭವ. ಪ್ರಚಾರದ ಮೊದಲ ಹಂತವಾಗಿ ಚಿತ್ರದ ನಾಲ್ಕು ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭವು ಇತ್ತೀಚೆಗೆ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಸ್ವಾಮಿಗಳು, ಮೌಲ್ವಿಗಳು ಮತ್ತು ಪಾದ್ರಿಗಳು ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದ್ದು ವಿಶೇಷ.
ಚಿತ್ರದ ಕಥೆಯಲ್ಲಿ ಬಡತನ, ಶ್ರೀಮಂತ ವ್ಯತ್ಯಾಸದ ಸೂಕ್ಷತೆ ಹೊಂದಿದ್ದು, ಈ ದೇಶದ ಹಲವಾರು ಹಸಿದವರ, ಉಪವಾಸವಿದ್ದವರ, ದಮನಿತರ, ದಲಿತರ, ಬಡವರ, ಹಿಂದುಳಿದವರ ಶಿಕ್ಷಣದ, ಆರೋಗ್ಯದ, ನೆಲದ ಹಕ್ಕಿನ ಅಂಶಗಳು ಇರಲಿದೆ. ಹಾಗೂ ಇಸ್ಲಾಂ ಸಮುದಾಯದ ಕಲ್ಮಾ, ರೋಜಾ, ನಮಾಜ್, ಜಕಾತ್, ಹಜ್ ಎಂಬ ಐದು ಮೂಲಭೂತ ತತ್ವಗಳ ಪರಿಪಾಲನೆಯನ್ನು, ಉಳ್ಳವರು ಮತ್ತು ಇಲ್ಲದವರ ಎರಡು ಕುಟುಂಬಗಳ ಮಧ್ಯೆ ಹೋಲಿಕೆ ಮಾಡುವ ಸನ್ನಿವೇಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಪತ್ನಿಯಾಗಿ ಪ್ರೇಮಾವತಿ ಉಪಾಸೆ, ಮಗಳಾಗಿ ಬೇಬಿ ಈಶಾನಿ ಉಪಾಸೆ, ಮಗನಾಗಿ ಮಾಸ್ಟರ್ ವೇದಿಕ್ ಉಳಿದಂತೆ ಭಾಸ್ಕರ್ ಮಣಿಪಾಲ್, ಮಾಸ್ಟರ್ ನೀಲ್, ಜಯಲಕ್ಷಿ ಮಧುರಾಜ್, ಮಂಜುನಾಥ್ ಕರುವಿನಕಟ್ಟೆ, ಆರ್ಯನ್, ಆದ್ಯತಾಭಟ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಇಂದ್ರ ಸಂಗೀತ, ರಂಗಸ್ವಾಮಿ.ಜಿ ಛಾಯಾಗ್ರಹಣ, ಡಿ.ಮಲ್ಲಿ ಸಂಕಲನ, ಪಳನಿ.ಡಿ.ಸೇನಾಪತಿ ಮಿಕ್ಸಿಂಗ್ ಇದೆ. ರವೀಂದ್ರ ಸೊರಗಾವಿ, ಶಶಾಂಕ್ ಶೇಷಗಿರಿ, ಕಡಬಗೆರೆ ಮುನಿರಾಜು, ಹರ್ಷ ಆಧಿಬಟ್ಲಾ ಗೀತೆಗಳಿಗೆ ಧ್ವನಿಯಾಗಿದ್ದಾರೆ. ಮಂಗಳೂರು, ಉಡುಪಿ, ಕಟ್ಪಾಡಿ, ಗುಲ್ವಾಡಿ, ಕುಂದಾಪುರ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿರುವ ಈ ಚಿತ್ರ ಸೆನ್ಸಾರ್ನಿಂದ ಪ್ರಶಂಸೆ ಪಡೆದು ’ಯು’ ಪ್ರಮಾಣಪತ್ರ ಪಡೆದುಕೊಂಡಿದೆ. ಚಿತ್ರವನ್ನು ಇದೇ ಏಪ್ರಿಲ್ನಲ್ಲಿ ತೆರೆಗೆ ತರಲು ತಂಡವು ಯೋಜನೆ ರೂಪಿಸಿಕೊಂಡಿದೆ.
Also read :: ‘Ramzan’ a social wellness film
ಇಂದಿನಿಂದ ಸುವರ್...
Veda Krishnamurthy visits Hoysala film s...
ಮರಳಿ ಬರಲಿದೆಯಾ ...
Bangalore Boys - hero first-look poster ...
ಪೆಂಟಗಾನ್ ವಿರುದ...
'Driver Jamuna' trailer released by Kish...
ಅದ್ದೂರಿಯಾಗಿ ನಡ...
Dhananjay's Jamaligudda posters revealed
ಶ್ರುತಿ ತಂಗಿ ಮಗ...
'Shava Samskara' teaser released