ಗಗನ್. ಎಂ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ಜನವರಿ13ಕ್ಕೆ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ಬಿಗ್ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ, ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ಗೀತಾ ಭಾರತಿ, ಪಂಚಮಿ ರಾವ್ ಮುಖ್ಯ ಭೂಮಿಕೆಯ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಇದೇ ಮೊದಲ ಬಾರಿಗೆ ಮಾಧ್ಯಮದ ಮುಂದೆ ಬಂದಿರುವ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಗಗನ್. ಎಂ ಮಾತನಾಡಿ ಕಿರುಚಿತ್ರ, ಡಾಕ್ಯುಮೆಂಟರಿ ನಿರ್ದೇಶನ ಮಾಡಿದ್ದೇನೆ. ತುಳು ಸಿನಿಮಾವೊಂದಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಮಂಕು ಭಾಯ್ ಫಾಕ್ಸಿ ರಾಣಿ ನನ್ನ ನಿರ್ದೇಶನದ ಮೊದಲ ಸಿನಿಮಾ. ಮೊದಲು ಇದನ್ನು ಶಾರ್ಟ್ ಮೂವಿ ಮಾಡೋಣ ಎಂದು ಪ್ಲ್ಯಾನ್ ಮಾಡಿಕೊಂಡಿದ್ದೆ. ರೂಪೇಶ್ ಶೆಟ್ಟಿ ಈ ಸಿನಿಮಾ ಮಾಡಲು ಒಪ್ಪಿಕೊಂಡ ಮೇಲೆ ಇದರ ಕಥೆಯನ್ನು ಸಿನಿಮಾಗೆ ಹೇಗೆ ಬೇಕೋ ಹಾಗೆ ಸಿದ್ದ ಮಾಡಿಕೊಂಡ್ವಿ. 2019ರಲ್ಲಿ ಆರಂಭವಾದ ಸಿನಿಮಾವಿದು. ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಪೂರ್ತಿ ಕಥೆ ಮಂಗಳೂರು ಕನ್ನಡ ಭಾಷೆಯಲ್ಲಿ ಸಾಗಲಿದೆ. ಯಕ್ಷಗಾನದಲ್ಲಿ ಸಿಂಹದ ವೇಷ ಹಾಕುವ ಹುಡುಗನ ಜೀವನದಲ್ಲಿ ನಡೆಯುವ ಪ್ರೇಮಕಥೆ ಸುತ್ತ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾ ಜನವರಿ 13ಕ್ಕೆ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.
ನಾಯಕಿ ಪಂಚಮಿ ರಾವ್ ಮಾತನಾಡಿ ಇದು ನನ್ನ ಮೊದಲ ಸಿನಿಮಾ. ನಾನು ಕ್ಲಾಸಿಕಲ್ ಡಾನ್ಸರ್ ಕೂಡ ಹೌದು. ಸಿನಿಮಾ ರಂಗದ ಮೇಲೆ ಮೊದಲಿನಿಂದ ಆಸಕ್ತಿ ಇತ್ತು. ಒಂದೊಳ್ಳೆ ಕಂಟೆಂಟ್ ಇರುವ ಸಿನಿಮಾ ಮಾಡಬೇಕು ಎಂಬ ಆಸೆ ಇತ್ತು. ನಿರ್ದೇಶಕರು ಕಥೆ ಹೇಳಿದಾಗ ಕಥೆ ತುಂಬಾ ಯೂನೀಕ್ ಎನಿಸಿತು ಆದ್ರಿಂದ ಒಪ್ಪಿಕೊಂಡೆ. ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದ್ರು. ಗೀತಾ ಭಾರತಿ ಭಟ್ ಮಾತನಾಡಿ ನನಗೆ ಈ ಪ್ರಾಜೆಕ್ಟ್ ಪರ್ಸನಲಿ ತುಂಬಾ ಸ್ಪೆಷಲ್. ಹಲವು ಸಿನಿಮಾಗಳಲ್ಲಿ ಸಪೋರ್ಟಿಂಗ್ ಕ್ಯಾರೆಕ್ಟರ್ ಮಾಡಿದ್ದೇನೆ ಆದ್ರೆ ಲೀಡ್ ರೋಲ್ ನಲ್ಲಿ ಮಾಡಿರೋದು ಇದೇ ಮೊದಲು. ಶೂಟಿಂಗ್ ಅನುಭವ ತುಂಬಾ ಚೆನ್ನಾಗಿತ್ತು. ಆರಂಭದಲ್ಲಿ ಮಂಗಳೂರು ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಆದ್ರೆ ಶೂಟಿಂಗ್ ಮುಗಿಯುವ ಹೊತ್ತಿಗೆ ಪೂರ್ತಿ ಮಂಗಳೂರು ಕನ್ನಡ ಕಲಿತಿದ್ದೆ. ಸಿನಿಮಾ ಎರಡೂವರೆ ವರ್ಷದ ನಂತರ ತೆರೆ ಮೇಲೆ ಬರ್ತಿದೆ. ನನ್ನನ್ನು ನಾನು ತೆರೆ ಮೇಲೆ ನೋಡಿಕೊಂಡಾಗ ಇನ್ನಷ್ಟು ಮುಂದೆ ಹೋಗಲು ಆತ್ಮ ವಿಶ್ವಾಸ ಬಂದಿದೆ. ಸಿನಿಮಾ ಜನವರಿ13ಕ್ಕೆ ಬಿಡುಗಡೆಯಾಗ್ತಿದೆ ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದ್ರು.
ನಾಯಕ ನಟ ರೂಪೇಶ್ ಶೆಟ್ಟಿ ಮಾತನಾಡಿ ಈ ಸಿನಿಮಾ ಶೂಟ್ ಆಗಿ ಮೂರು ವರ್ಷ ಆಯ್ತು. ಚಿತ್ರದಲ್ಲಿ ಕಟೆಂಟ್ ಹೀರೋ. ಯಕ್ಷಗಾನದಲ್ಲಿ ಸಿಂಹದ ವೇಷ ಹಾಕೋ ಹುಡುಗನ ಕಥೆ ಚಿತ್ರದಲ್ಲಿದೆ. ಫ್ರೆಂಡ್ಸೇ ಆತನಿಗೆ ಪ್ರಪಂಚ ಇದರೊಂದಿಗೆ ಒಂದು ಮುಗ್ಧ ಲವ್ ಸ್ಟೋರಿ ಇರುವ ಸಿನಿಮಾ. ನಿರ್ದೇಶಕ ಗಗನ್ ಒಂದು ಕನ್ನಡ ಸಿನಿಮಾ ಮಾಡೋಣ ಎಂದಾಗ ಒಪ್ಪಿಕೊಂಡೆ. ನಾನು ಹೀರೋ ಎಂಟ್ರಿ ಕಮರ್ಶಿಯಲ್ ಆಗಿರಬೇಕು, ಹೀಗಿರಬೇಕು ಅಂದುಕೊಂಡಿದ್ದೆ ಆದ್ರೆ ಈ ಸಿನಿಮಾ ಪ್ಲಾಟ್ ಹಾಗಿರಲಿಲ್ಲ. ಚಿತ್ರಕ್ಕೆ ದಪ್ಪ ಆಗಬೇಕು, ದಾಡಿ ತೆಗಿಯಬೇಕು, ಯಕ್ಷಗಾನದಲ್ಲಿ ಸಿಂಹದ ಪಾತ್ರ ಮಾಡುವ ವ್ಯಕ್ತಿ ಪಾತ್ರ ಎಂದು ನಿರ್ದೇಶಕರು ಹೇಳಿದ್ರು. ಚಿತ್ರಕ್ಕಾಗಿ ಎಂಟು ಕೆಜಿ ದಪ್ಪ ಆಗಿದ್ದೆ. ಕನ್ನಡದಲ್ಲಿ ಲೀಡ್ ಆಗಿ ನಟಿಸುತ್ತಿರುವ ಐದನೇ ಸಿನಿಮಾವಿದು. ‘ಡೇಂಜರ್ ಝೋನ್’, ‘ಅನುಷ್ಕಾ’, ‘ನಿಶಬ್ಧ 2’, ‘ಗೋವಿಂದ ಗೋವಿಂದ’ ಸಿನಿಮಾ ಮಾಡಿದ್ದೇನೆ ಆಗೆಲ್ಲ ಆ ಸಿನಿಮಾದಲ್ಲಿ ನಾನಿದ್ದೇನೆ ಎಂದು ಹೇಳುತ್ತಿದ್ದೆ ಆದ್ರೆ ಫಸ್ಟ್ ಟೈಂ ರೂಪೇಶ್ ಶೆಟ್ಟಿ ಸಿನಿಮಾ ಬರ್ತಿದೆ ಎಂದು ಎಲ್ಲರು ಹೇಳುತ್ತಿದ್ದಾರೆ ಇದು ತುಂಬಾ ಖುಷಿ ಕೊಡ್ತಿದೆ. ಇದಕ್ಕೆಲ್ಲ ಬಿಗ್ ಬಾಸ್ ಕಾರಣ. ಜನವರಿ 13ಕ್ಕೆ ಸಿನಿಮಾ ಬಿಡುಗಡೆಯಾಗ್ತಿದೆ ಎಲ್ಲರೂ ಸಿನಿಮಾ ನೋಡಿ ಗೆಲ್ಲಿಸಿ ಎಂದು ಸಂತಸ ಹಂಚಿಕೊಂಡ್ರು. ನಿರ್ಮಾಪಕ ಜೋಶ್ವ ಜೈಶಾನ್ ಕ್ರಾಸ್ತ, ಜೋಶ್ವ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿನ್ಯಾಸ್ ಮದ್ಯ, ಶಮೀರ್ ಮುಡಿಪು ಸಂಗೀತ ನಿರ್ದೇಶನ, ಶಿನೋಯ್ ವಿ ಜೋಸೆಫ್ ಹಿನ್ನೆಲೆ ಸಂಗೀತ, ಎಂ.ಕೆ ಷಜಹಾನ್ ಕ್ಯಾಮೆರಾ ವರ್ಕ್, ಸುಶಾಂತ್ ಶೆಟ್ಟಿ, ಪ್ರಜ್ವಲ್ ಸುವರ್ಣ ಸಂಕಲನ ಚಿತ್ರಕ್ಕಿದೆ. ಪ್ರಕಾಶ್ ತೂಮಿನಾಡು, ಅರ್ಜುನ ಕಜೆ, ಪ್ರಶಾಂತ್ ಅಂಚನ್, ವಿವೇಕ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸೆನ್ಸಾರ್ ನಲ್ಲಿ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿರುವ ‘ಮಂಕು ಭಾಯ್ ಫಾಕ್ಸಿ ರಾಣಿ’ ಚಿತ್ರ ಜನವರಿ 13ರಂದು ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ.
ಇಂದಿನಿಂದ ಸುವರ್...
Veda Krishnamurthy visits Hoysala film s...
ಮರಳಿ ಬರಲಿದೆಯಾ ...
Bangalore Boys - hero first-look poster ...
ಪೆಂಟಗಾನ್ ವಿರುದ...
'Driver Jamuna' trailer released by Kish...
ಅದ್ದೂರಿಯಾಗಿ ನಡ...
Dhananjay's Jamaligudda posters revealed
ಶ್ರುತಿ ತಂಗಿ ಮಗ...
'Shava Samskara' teaser released